Saturday, April 17, 2021
Home ಸುದ್ದಿ ಜಾಲ ಆಕ್ಸ್‌ಫರ್ಡ್‌ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಶ್ಮಿ ಸಾಮಂತ್‌ ರಾಜೀನಾಮೆ

ಇದೀಗ ಬಂದ ಸುದ್ದಿ

ಆಕ್ಸ್‌ಫರ್ಡ್‌ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಶ್ಮಿ ಸಾಮಂತ್‌ ರಾಜೀನಾಮೆ

 ಲಂಡನ್ಆಕ್ಸ್‌ಫರ್ಡ್ ವಿದ್ಯಾರ್ಥಿ ಸಂಘದ (ಎಸ್‌ಯು) ಅಧ್ಯಕ್ಷರಾಗಿ ಇತ್ತೀಚೆಗೆಷ್ಟೇ ಆಯ್ಕೆಯಾದ ಮಣಿಪಾಲ ಮೂಲದ ರಶ್ಮಿ ಸಾಮಂತ್‌ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ಮಹಿಳೆ ಆಗಿದ್ದ ರಶ್ಮಿ ಅವರು, ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಪೋಸ್ಟ್‌ ಮಾಡಿದ್ದ ಜನಾಂಗೀಯ ಮತ್ತು ಸಂವೇದನಾರಹಿತವಾದ ಹೇಳಿಕೆಗಳಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.

TRENDING