Tuesday, April 13, 2021
Home ಬೆಂಗಳೂರು ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ

ಇದೀಗ ಬಂದ ಸುದ್ದಿ

ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ

 ಬೆಂಗಳೂರು: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ.

ಸಚಿವ ನಾರಾಯಣಗೌಡ ನಾಪತ್ರ ಸಲ್ಲಿಕೆ ವೇಳೆ ಕೆಲ ಆಸ್ತಿ ವಿವರ ಮರೆಮಾಚಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಚಿವರ ವಿರುದ್ಧ ತನಿಖೆಗೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲರ ಕಚೇರಿಯಿಂದ ಪತ್ರ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರಿಗೆ ಸಂಕಷ್ಟ ಎದುರಾಗಿದೆ.

TRENDING