Saturday, April 17, 2021
Home ಸುದ್ದಿ ಜಾಲ ಸತತ 11 ನೇ ದಿನವೂ ಪೆಟ್ರೋಲ್-ಡೀಸೆಲ್ ದರ ಏರಿಕೆ

ಇದೀಗ ಬಂದ ಸುದ್ದಿ

ಸತತ 11 ನೇ ದಿನವೂ ಪೆಟ್ರೋಲ್-ಡೀಸೆಲ್ ದರ ಏರಿಕೆ

 ನವದೆಹಲಿ: 11ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತೆ ತೈಲ ದರ ದಿನೇ ದಿನೇ ಭಾರೀ ದುಬಾರಿಯಾಗುತ್ತಿದೆ.

ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 31 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 33 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ದೈನಂದಿನ ದರ ಪರಿಷ್ಕರಣೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 90.19 ರೂಪಾಯಿ, ಡೀಸೆಲ್ 80.60 ರೂಪಾಯಿ ಇದೆ.

ದೈನಂದಿನ ದರ ಪರಿಷ್ಕರಣೆ ನಂತರ ತೆರಿಗೆ, ಸಾಗಣೆ ವೆಚ್ಚ ಮೊದಲಾದವುಗಳಿಂದಾಗಿ ಆಯಾ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸವಿರುತ್ತದೆ. ಹಲವು ಕಡೆ ಪೆಟ್ರೋಲ್ ದರ ಲೀಟರ್ ಗೆ 100 ರೂ. ಗಡಿ ದಾಟಿ ಮುನ್ನುಗ್ಗುತ್ತಿದೆ.

TRENDING