Tuesday, April 13, 2021
Home ಸುದ್ದಿ ಜಾಲ ವಿಶ್ವದಾದ್ಯಂತ 11 ಕೋಟಿಗೂ ಅಧಿಕ ಕೊರೊನಾ ಸೋಂಕಿತರು

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 11 ಕೋಟಿಗೂ ಅಧಿಕ ಕೊರೊನಾ ಸೋಂಕಿತರು

 ವಾಷಿಂಗ್ಟನ್: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 11 ಕೋಟಿ ಜನರಿಗೆ ಕೋವಿಡ್‌-19 ಸೋಂಕು ತಗುಲಿದೆ. ಇದರಲ್ಲಿ 8.54 ಕೋಟಿ ಸೋಂಕಿತರು ಗುಣಮುಖರಾಗಿದ್ದು, 24.43 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ವಿಶ್ವದಾದ್ಯಂತ ಇಂದು ಹೊಸದಾಗಿ 1,32,556 ಪ್ರಕರಣಗಳು ಬೆಳಕಿಗೆ ಬಂದಿದ್ದು, 3,652 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 8,54,41,137 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 2.2 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 95,984 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 1,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 42 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,02,586ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 1,09,56,182 ಪ್ರಕರಣಗಳು ವರದಿಯಾಗಿವೆ.

ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 99.79 ಲಕ್ಷ, ಫ್ರಾನ್ಸ್‌ನಲ್ಲಿ 35.14 ಲಕ್ಷ, ರಷ್ಯಾದಲ್ಲಿ 41.25 ಲಕ್ಷ, ಸ್ಪೇನ್‌ನಲ್ಲಿ 31.07 ಲಕ್ಷಕ್ಕೆ ಏರಿಯಾಗಿವೆ.

TRENDING