Tuesday, April 13, 2021
Home ಸುದ್ದಿ ಜಾಲ ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ವಿದರ್ಭ, ಛತ್ತೀಸಗಡ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೇ ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣದಿಂದಾಗಿ, ಮಧ್ಯ ಹಾಗೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

ಇನ್ನೂ ರಾಜ್ಯದಲ್ಲೂ ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತಗೊಂಡಿರುವ ಕಾರಣ, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಬಾಗಲಕೋಟೆ, ವಿಜಾಪುರ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಶಿರಸಿ, ಹಳಿಯಾಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುಸ್ಸೂಚನೆ ನೀಡಿದೆ.

TRENDING