Tuesday, April 13, 2021
Home ಜಿಲ್ಲೆ ಬೆಂಗಳೂರು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ :ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಇದೀಗ ಬಂದ ಸುದ್ದಿ

ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ :ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

 ಬೆಂಗಳೂರುಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್​ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಸಂಜೆ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾಗ ನೈಸ್​ ರಸ್ತೆ ಬಳಿಯ ಕದಂಬ ಹೋಟೆಲ್​ ಬಳಿ ಈ ಅಪಘಾತ ನಡೆದಿದ್ದು, ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್​ಆರ್​ಟಿಸಿ ಬಸ್​​ ಡಿಕ್ಕಿ ಹೊಡೆದಿದೆ.

ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಸಚಿವರನ್ನು ಮತ್ತು ಕಾರು ಚಾಲಕನನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

TRENDING