Tuesday, April 13, 2021
Home ಸುದ್ದಿ ಜಾಲ ಉಡುಪಿಯಲ್ಲಿ ಶನಿವಾರ 16 ಮಂದಿಗೆ ಕೊರೋನ ಪಾಸಿಟಿವ್

ಇದೀಗ ಬಂದ ಸುದ್ದಿ

ಉಡುಪಿಯಲ್ಲಿ ಶನಿವಾರ 16 ಮಂದಿಗೆ ಕೊರೋನ ಪಾಸಿಟಿವ್

 ಉಡುಪಿ, ಫೆ.20: ಶನಿವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 16 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 15 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 47 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 10 ಮಂದಿ ಪುರುಷರು ಹಾಗೂ ಉಳಿದ ಆರು ಮಂದಿ ಮಹಿಳೆಯರು. ಇವರಲ್ಲಿ ತಲಾ ಎಂಟು ಮಂದಿ ಉಡುಪಿ ಮತ್ತು ಕುಂದಾಪುರ ತಾಲೂಕಿನವರು. ಶುಕ್ರವಾರ 15 ಮಂದಿ ಕೋವಿಡ್‌ನಿಂದ ಮುಕ್ತರಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 23,278ಕ್ಕೇರಿದೆ.

1146 ಮಂದಿ ನೆಗೆಟಿವ್: ಜಿಲ್ಲೆಯ 1157 ಮಂದಿ ಶುಕ್ರವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1146 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 11 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,514 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,56,668 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,33,154 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ.

TRENDING