ಬೆಂಗಳೂರು : 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು 1ನೇ ಸಿಟಿ ಸಿವಿಲ್ ಕೋರ್ಟ್ ವಜಾಗೊಳಿಸಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಾದಂತ ಅಮಿತ್ ದಿಗ್ವೇಕರ್, ಸುರೇಶ್ ಹೆಚ್, ರಾಜೇಶ್ ಡಿ ಬಂಗೇರಾ, ಸುಜೇತ್ ಹಾಗೂ ಸುಧನ್ವ ಜಾಮೀನಿಗಾಗಿ 1ನೇ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಐವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.