Tuesday, April 13, 2021
Home ಜಿಲ್ಲೆ ಮೈಸೂರು ತಮ್ಮ ಹುಟ್ಟೂರಿನಲ್ಲೇ ರಾಮಮಂದಿರ ಕಟ್ಟಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ತಮ್ಮ ಹುಟ್ಟೂರಿನಲ್ಲೇ ರಾಮಮಂದಿರ ಕಟ್ಟಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರವಾಗಿ ಲೆಕ್ಕಕೇಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ತಮ್ಮ ಹುಟ್ಟೂರಿನಲ್ಲೇ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಸಿದ್ದರಾಮನ ಹುಂಡಿಯಲ್ಲಿದ್ದ ಹಳೆಯ ಕಾಲದ ರಾಮಮಂದಿರ ಜೀರ್ಣೋದ್ಧಾರಗೊಳಿಸಲಾಗುತ್ತಿದ್ದು, ನೂತನ ಮಂದಿರ ನಿರ್ಮಿಸಲಾಗುತ್ತಿದೆ. ಈ ಕಾರ್ಯಕ್ಕೆ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ಕೂಡ ಕೈಜೋಡಿಸಿದ್ದಾರೆಂದು ತಿಳಿದುಬಂದಿದೆ.

ಸುಮಾರು ರೂ.45 ಲಕ್ಷ ವೆಚ್ಚದಲ್ಲಿ 30*40 ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿರುವ ಕುರಿತು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರು, ನಿರ್ಮಾಣ ಕಾರ್ಯದಲ್ಲಿ ಸಿದ್ದರಾಮಯ್ಯ ಅವರ ಸಹಕಾರ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಗ್ರಾಮಸ್ಥರ ದೇಣಿಗೆಯಿಂದ ಮಂದಿರ ನಿರ್ಮಾಣವಾಗುತ್ತಿದೆ. ಎಲ್ಲೆಲ್ಲೂ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇದು ಜನರ ಧಾರ್ಮಿಕ ನಂಬಿಕೆ. ಬಿಜೆಪಿಯವರು ರಾಮ ಮಂದಿರ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಜನರು ರಾಮ ಮಂದಿರಕ್ಕಾಗಿ ದೇಣಿಗೆ ನೀಡುತ್ತಿದ್ದಾರೆಯೇ ವಿನಃ ಬಿಜೆಪಿಗಲ್ಲ ಎಂಬುದನ್ನು ಅವರು ತಿಳಿದುಕೊಳ್ಳಬೇಕಿದೆ. ಲೆಕ್ಕ ಕೇಳುವ ಅಧಇಕಾರ ನನಗೂ ಇದೆ. ನಾನು ಈ ದೇಶದ ಪ್ರಜೆ. ನಾನು ದುಡ್ಡು ಕೊಡಲಿ, ಬಿಡಲಿ ಲೆಕ್ಕ ಕೊಡುವುದು ಅವರ ಕೆಲಸ. ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಹಣ ದುರುಪಯೋಗವಾಗಿದೆ ಎಂದು ಅರ್ಥ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಹಿಂದೆ ಕೂಡ ಬಿಜೆಪಿ ದೇಣಿಗೆ ಸಂಗ್ರಹ ಮಾಡಿತ್ತು. ಆದರೆ, ಲೆಕ್ಕವನ್ನೇ ನೀಡಿರಲಿಲ್ಲ. ಇದರ ಅರ್ಥವೇನು? ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ರಾಮ ನವಮಿಗೆ ತಮ್ಮ ಊರಲ್ಲೇ ರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಸಿದ್ದರಾಮಯನ ಹುಂಡಿ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮದ ನಿವಾಸಿಯಾಗಿರುವ ಮಂಜೇಶ್ ಎಂಬುವವರು ಮಾತನಾಡಿ, ಜನರ ನಂಬಿಕೆಗಳಿಗೆ ಗೌರವ ನೀಡಿ ಮಂದಿರ ನಿರ್ಮಾಣಕ್ಕೆ ಸಹಕಾರ ನೀಡುತ್ತಿರುವ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆ.

ಮಂದಿರ ನಿರ್ಮಾಣ ಪೂರ್ಣಗೊಳ್ಳುತ್ತಿದ್ದಂತೆಯೇ ಉತ್ಸವಕ್ಕೆ ಸ್ನೇಹಿತರು ಹಾಗೂ ಸಂಬಂಧಿಕರನ್ನು ಕರೆಯಲು ಸಿದ್ಧತೆ ನಡೆಸಿದ್ದೇವೆಂದು ತಿಳಿಸಿದ್ದಾರೆ

TRENDING