Sunday, February 28, 2021
Home ರಾಜಕೀಯ ಹೈಕಮಾಂಡ್ ಬುಲಾವ್: ದಿಢೀರ್ ದೆಹಲಿಗೆ ತೆರಳಿದ ಬಸವನಗೌಡ ಪಾಟೀಲ್ ಯತ್ನಾಳ್

ಇದೀಗ ಬಂದ ಸುದ್ದಿ

ಹೈಕಮಾಂಡ್ ಬುಲಾವ್: ದಿಢೀರ್ ದೆಹಲಿಗೆ ತೆರಳಿದ ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದಿಢೀರ್ ದೆಹಲಿಗೆ ತೆರಳಿದ್ದಾರೆ.

ರಾತ್ರಿಯೇ ಬಸವನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಪದೇ ಪದೇ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಯತ್ನಾಳ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೂಡಲೇ ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ತುರ್ತಾಗಿ ಬರುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಬಸವನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಿಎಂ, ಸರ್ಕಾರ ಮತ್ತು ಪಕ್ಷದ ಬಗ್ಗೆ ಹೇಳಿಕೆ ನೀಡಿ ಮುಜುಗರ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಪಕ್ಷದಿಂದ ನೋಟಿಸ್ ನೀಡಿದ್ದು, ಅವರು ಉತ್ತರವನ್ನು ಕೂಡ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಮತ್ತೆ ಸಿಎಂ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ತುರ್ತಾಗಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

TRENDING