Sunday, February 28, 2021
Home ರಾಜ್ಯ ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಫೆಬ್ರವರಿ 23 ರವರೆಗೆ ಗುಡುಗು ಸಹಿತ ಮಳೆ ಬೀಳಲಿದ್ದು, ದಕ್ಷಿಣ ಒಳನಾಡು ಭಾಗದಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಫೆಬ್ರವರಿ 24 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆ ಆಗಲಿದ್ದು, ಉತ್ತರ ಒಳನಾಡು ಭಾಆಗದ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಇಂದು ಧಾರಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

TRENDING