Tuesday, March 9, 2021
Home ರಾಜಕೀಯ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅಧಿಕಾರ ಸ್ವೀಕಾರ

ಬೆಂಗಳೂರು: ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಧೃವನಾರಾಯಣ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ನಗರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರ ಜಯಘೋಷದ ನಡುವೆ ಪಕ್ಷದ ನೂತನ ಕಾರ್ಯಾಧ್ಯಕ್ಷರ ಜವಾಬ್ದಾರಿಯನ್ನು ಮಾಜಿ ಸಚಿವ ರಾಮಾಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧೃವನಾರಾಯಣ್ ವಹಿಸಿಕೊಂಡರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಗಾಗಲೇ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರ ಮತ್ತು ಸಲೀಂ ಅಹ್ಮದ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಾರಕಿಹೊಳಿ- ಎಸ್ ಟಿ, ಈಶ್ವರ ಖಂಡ್ರೆ- ಲಿಂಗಾಯತ, ಸಲೀಂ ಅಹ್ಮದ್-ಅಲ್ಪ ಸಂಖ್ಯಾತ, ರಾಮಲಿಂಗಾ ರೆಡ್ಡಿ- ರೆಡ್ಡಿ, ಧೃವ ನಾರಾಯಣ ಎಸ್ ಸಿ ಬಲ ಪಂಗಡಕ್ಕೆ ಸೇರಿದವರಾಗಿದ್ದಾರೆ.

ಅವರು ಧ್ರುವನಾರಾಯಣ ಅವರಿಗೆ ಉನ್ನತ ಹುದ್ದೆ ನೀಡಿರುವುದು ಪಕ್ಷದೊಳಗಿನ ಎಸ್‌ಸಿ ಎಡಗೈ ಸಮುದಾಯದ ಗೊಣಗಾಟಕ್ಕೆ ಕಾರಣವಾಗಿದೆ, ಏಕೆಂದರೆ ಈಗಾಗಲೇ ಅವರಿಗೆ ಸಾಕಷ್ಟು ಪ್ರಾತಿನಿಧ್ಯವಿಲ್ಲ ಎಂಬ ಅಸಮಾಧಾನವಿದೆ, ಏಕೆಂದರೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕೂಡ ಎಸ್ ಸಿ ಬಲಗೈ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಹಿಂದುಳಿದ ವರ್ಗಗಳ ಪೈಕಿ, ಈಡಿಗರು ರಾಜ್ಯದ ಜನಸಂಖ್ಯೆಯ ಶೇಕಡಾ 4-5ರಷ್ಟಿದೆ ಮತ್ತು ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದುಳಿದ ಸಮುದಾಯಗಳ ಪಟ್ಟಿಯಲ್ಲಿ ಅವರು ಕುರುಬರ ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ ಸಮುದಾಯದ ಓರ್ವ ನಾಯಕರಲ್ಲಿ ಒಬ್ಬರನ್ನು ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಡವಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರುಗಳ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾಜಿ ಸಚಿವ ರಾಮಲಿಂಗಾರೆಡ್ಡಿ, ಧೃವನಾರಾಯಣ್ ಇವರುಗಳಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಕಾರ್ಯಾಧ್ಯಕ್ಷರ ಕಾರ್ಯಾಭಾರವನ್ನು ವಹಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತವನ್ನು ತರುವ ಸಂಕಲ್ಪವನ್ನು ಮಾಡಲಾಯಿತು. ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ್, ಕಾರ್ಯಾಧ್ಯಕ್ಷರು ಗಳಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಪ್ರಮುಖ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

TRENDING