Tuesday, March 9, 2021
Home ಸಿನಿಮಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ ನವರಸ ನಾಯಕ..!

ಇದೀಗ ಬಂದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ ನವರಸ ನಾಯಕ..!

 ಬೆಂಗಳೂರು: ನವರಸ ನಾಯಕ ಜಗ್ಗೇಶ್ ವಿರುದ್ಧ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಸಿಡಿದೆದ್ದಿದ್ದು, ಶೂಟಿಂಗ್ ಸ್ಪಾಟ್ ಗೆ ತೆರಳಿ ಘೇರಾವ್ ಹಾಕಿದ ಘಟನೆ ನಡೆದಿದೆ.

ನಟ ಜಗ್ಗೇಶ್, ದರ್ಶನ್ ಅಭಿಮಾನಿಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು ಇದರಿಂದ ಆಕ್ರೋಶಗೊಂಡಿರುವ ದರ್ಶನ್ ಅಭಿಮಾನಿಗಳು, ಜಗ್ಗೇಶ್ ನಟನೆಯ ತೋತಾಪುರಿ ಚಿತ್ರದ ಶೂಟಿಂಗ್ ಸ್ಪಾಟ್ ಗೆ ತೆರಳಿ ಜಗ್ಗೇಶ್ ಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ಮಾತನಾಡಿದ್ದಕ್ಕೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವೇಳೆ ಜಗ್ಗೇಶ್, ನಾನು ಯಾವುದೇ ರೀತಿ ಕೆಟ್ಟದಾಗಿ ಮಾತನಾಡಿಲ್ಲ. ಇದರ ಹಿಂದೆ ದೊಡ್ಡ ಹುನ್ನಾರ ನಡೆದಿದೆ. ಆಡಿಯೋ ಎಡಿಟ್ ಮಾಡಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೂ ಪಟ್ಟು ಬಿಡದ ದರ್ಶನ್ ಅಭಿಮಾನಿಗಳು ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದಾರೆ. ಒತ್ತಡಕ್ಕೆ ಮಣಿದ ಜಗ್ಗೇಶ್ ಕೊನೆಗೂ ದರ್ಶನ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ಅಷ್ಟಕ್ಕೂ ಜಗ್ಗೇಶ್ ಆಡೀಯೋದಲ್ಲಿ ಹೇಳಿದ್ದೇನು?: ನಮ್ಮಹತ್ರ ಇರೋರೆಲ್ಲ ಹಾರ್ಡ್ ವರ್ಕ್ ಮಾಡೋರು. ದರ್ಶನ್ ಅಭಿಮಾನಿಗಳ ಥರ ತಲೆ ಮಾಂಸ ಕೇಳೋರು, ನೂರು ಕುರಿ ಕಳಿಸಿ ಅಂತ ಕೇಳೋರು ಯಾರೂ ಇಲ್ಲ ಎಂದು ದರ್ಶನ್ ಅಭಿಮಾನಿಗಳ ಬಗ್ಗೆ ಅವಹೇಳನಕಾರಿಯಾಗಿ ಜಗ್ಗೇಶ್ ಹೇಳಿದ್ದಾರೆ ಎಂಬ ಆಡಿಯೋ ಭಾರಿ ವೈರಲ್ ಆಗಿದೆ.

TRENDING