Tuesday, March 9, 2021
Home ರಾಜಕೀಯ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲರೂ ಗೌರವ ನೀಡಬೇಕು:ಬಿ.ಸಿ. ಪಾಟೀಲ್

ಇದೀಗ ಬಂದ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲರೂ ಗೌರವ ನೀಡಬೇಕು:ಬಿ.ಸಿ. ಪಾಟೀಲ್

ವಿಜಯಪುರ: ಮುಖ್ಯಮಂತ್ರಿ ಸ್ಥಾನ ಗೌರವಯುತವಾಗಿದ್ದು , ಸಿಎಂ ಯಡಿಯೂರಪ್ಪ ಅವರಿಗೆ ಎಲ್ಲರೂ ಗೌರವ ಕೊಡಬೇಕು ಎಂದು ಸಿಎಂ ವಿರೋಧಿ ಬಣದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ನೇರ ಚಾಟಿ ಬೀಸಿದ್ದಾರೆ.

ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ,ಮೀಸಲಾತಿ ಸಭೆಯಲ್ಲಿ ಯತ್ನಾಳ್ ಅಷ್ಟೇ ಭಾಗವಹಿಸಿಲ್ಲ. ಬೇರೆ ಬೇರೆ ಸಮುದಾಯದವರೂ ಭಾಗವಹಿಸಿದ್ದಾರೆ.ಆದರೆ ಸಿಎಂ ಸ್ಥಾನ ಗೌರವಯುತ ಸ್ಥಾನ, ಅದಕ್ಕೆ ಗೌರವ ಕೊಡಬೇಕು ಎಂದರು

ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂದು ಯತ್ನಾಳ ಹೇಳಿಕೆ ನೀಡಿರುವುದು ಯತ್ನಾಳ್ ಅವರ ವೈಯಕ್ತಿಕ ಅಭಿಪ್ರಾಯ. ದೆಹಲಿಗೆ ಅವರನ್ನು ಏಕೆ ಕರೆಸಿಕೊಂಡಿದ್ದರು ಎಂಬುದನ್ನು ಯತ್ನಾಳ್ ಅವರಿಗೇ ಕೇಳಬೇಕು ಎಂದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡದಿದ್ದರೆ ಸಮಾಜದ ಸಚಿವರು, ವಿವಿಧ ನಿಗಮ, ಮಂಡಳಿ ನೇಮಕಗೊಂಡವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಡ ಹೇರುವುದು ಸರಿಯಲ್ಲ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ನಿಲುವುಗಳಿರುತ್ತವೆ. ರಾಜೀನಾಮೆ ನೀಡುವಂತೆ ಯಾರೂ ಬಲವಂತ ಮಾಡಲಾಗದು ಎಂದರು. ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವುದು ಬಸನಗೌಡ ಪಾಟೀಲ್‌ ಯತ್ನಾಳ್ ಅವರ ವೈಯಕ್ತಿಕ ಅಭಿಪ್ರಾಯ.

ರಾಜೀನಾಮೆ ಕೊಡುವವರು ಅದಕ್ಕೆ ಬದ್ಧರಾಗಿರಬೇಕು. ಯತ್ನಾಳ್ ಹೇಳಿದ ಮಾತ್ರಕ್ಕೆ ರಾಜೀನಾಮೆ ಕೊಡಬೇಕು ಎಂಬುದೇನಿಲ್ಲ ಎಂದು ಸೂಚ್ಯವಾಗಿ ಹೇಳಿದರು. ಇದು ಜಾತ್ಯಾತೀತ ರಾಷ್ಟ್ರ, ಅವರವರ ಸಮುದಾಯಗಳಿಗೆ ಬೇಡಿಕೆ ಸಲ್ಲಿಸುವುದು ಅವರವರ ಹಕ್ಕು ಎಂದ ಮಾತ್ರಕ್ಕೆ ಈ ರೀತಿ ಬೇರೆಯವರ ಮೇಲೆ ಒತ್ತಡ ಹೇರುವುದು ಸರಿಯಲ್ಲ ಎಂದು ತಿಳಿಸಿದರು.

TRENDING