Monday, March 8, 2021
Home ಸುದ್ದಿ ಜಾಲ ರಾಜ್ಯದಲ್ಲಿ ಇಂದು ಹೊಸದಾಗಿ 317 ಜನರಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು ಹೊಸದಾಗಿ 317 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 317 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,48,466ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,299ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 181 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,03,943ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,30,087ಕ್ಕೆ ಏರಿಕೆಯಾಗಿದೆ. ಇನ್ನು 6061 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 128 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING