Sunday, February 28, 2021
Home ರಾಜ್ಯ ಹೆಚ್ಚು ಕಾವೇರಿ ನೀರನ್ನು ತೆಗೆದುಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: ಸಿಎಂ ಬಿ ಎಸ್ ವೈ

ಇದೀಗ ಬಂದ ಸುದ್ದಿ

ಹೆಚ್ಚು ಕಾವೇರಿ ನೀರನ್ನು ತೆಗೆದುಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: ಸಿಎಂ ಬಿ ಎಸ್ ವೈ

 ಬೆಂಗಳೂರು: ಈಗಾಗಲೇ ಹಂಚಿಕೆ ಯಾಗಿರುವಕ್ಕಿಂತ ಹೆಚ್ಚಿನ ನೀರನ್ನು ತಮಿಳುನಾಡಿಗೆ ಕಾವೇರಿಯಿಂದ ಪಡೆಯಲು ಕರ್ನಾಟಕ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ. ತಮಿಳುನಾಡಿನ ಉದ್ದೇಶಿತ ಕಾವೇರಿ-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಮಿಳುನಾಡಿಗೆ ಹೆಚ್ಚಿನ ನೀರು ಹಂಚಿಕೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ ಅಂತ ಹೇಳಿದರು.

ನಾವು ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ಹಿತ ಕಾಪಾಡಲಾಗುವುದು ಎಂದು ಅವರು ಹೇಳಿದರು. ಇನ್ನೂ ಇದೇ ವೇಳೆ ಈ ಬಗ್ಗೆ ಚರ್ಚಿಸಲು ಸರ್ವಪಕ್ಷ ಗಳ ಸಭೆ ನಡೆಸುತ್ತೀರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಆ ಬಗ್ಗೆ ನಾನು ಯೋಚನೆ ಮಾಡಿಲ್ಲ ಎಂದು ಹೇಳಿದರು. ಈ ಮಧ್ಯೆ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದು, ಈ ಬಗ್ಗೆ ಕೂಡಲೇ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಅಂತ, ಯಡಿಯೂರಪ್ಪ ಅವರಿಗೆಸಿದ್ದರಾಮಯ್ಯ ಹೇಳಿದರು.

TRENDING