Monday, March 8, 2021
Home ಸುದ್ದಿ ಜಾಲ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ: ಪ್ರಧಾನಿ ಕಚೇರಿಯಲ್ಲಿ ಸಭೆ..!

ಇದೀಗ ಬಂದ ಸುದ್ದಿ

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ: ಪ್ರಧಾನಿ ಕಚೇರಿಯಲ್ಲಿ ಸಭೆ..!

ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೂಡ ಭಾಗಿಯಾಗಿದ್ದಾರೆ.

ದೇಶಾದ್ಯಾಂತ 240 ಹೊಸ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಈ ಹೊಸ ತಳಿಗಳು ಆ ರಾಜ್ಯದಲ್ಲಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಮಹಾರಾಷ್ಟ್ರದ ಕೋವಿಡ್ ಟಾಸ್ಕ್ ಫೋರ್ಸ್ʼನ ಸದಸ್ಯ ಡಾ. ಶಶಿ ಜೋಶಿ ತಿಳಿಸಿದ್ದಾರೆ.

ಐದು ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಳ ಕಂಡು ಬರ್ತಿದ್ದು, ಎರಡು ರಾಜ್ಯಗಳಲ್ಲಿ ಕಳೆದ ಒಂದು ತಿಂಗಳಲ್ಲಿ ಜಿನೋಮ್ ಸೀಕ್ವೆನ್ಸಿಂಗ್ʼಗಾಗಿ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

TRENDING