Monday, March 8, 2021
Home ಅಂತರ್ ರಾಷ್ಟ್ರೀಯ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ 'ಕೊರೊನಾ ಮಾರ್ಗಸೂಚಿ' ಬಿಡುಗಡೆ

ಇದೀಗ ಬಂದ ಸುದ್ದಿ

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ‘ಕೊರೊನಾ ಮಾರ್ಗಸೂಚಿ’ ಬಿಡುಗಡೆ

ನವದೆಹಲಿ : ಮಹಾರಾಷ್ಟ್ರದಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ, ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗಾಗಿ ಹೊಸ ನಿಯಮಾವಳಿಗಳನ್ನು ಹೊರಡಿಸಿ ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ.

ಇಂದಿನಿಂದ ಮುಂದಿನ ಆದೇಶದವವರಗೆ ಈ ನಿಯಮ ಪಾಲನೆಗಳು ಕಡ್ಡಾಯವಾಗಿದ್ದು, ಹೊಸ ಕೋವಿಡ್ ಮಾರ್ಗಸೂಚಿಗಳು ಕೆಳಗಿನಂತಿದೆ.

1) ಕೋವಿಡ್ 19 RTPCR ಪರೀಕ್ಷೆ ನಡೆಸಿ ಕೊರೊನಾ ನೆಗೇಟಿವ್ ವರದಿಯನ್ನು www.newdelhiairport.in ಆನ್ ಲೈನ್ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು

2) ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರು, ಪ್ರಯಾಣಕ್ಕೂ ಮೊದಲು ಆನ್ ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಕೋವಿಡ್ ಸೋಂಕು ಪರೀಕ್ಷೆಯ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು

3) ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ಕೊರೊನಾ ಪರೀಕ್ಷೆ ನಡೆಸಿರಬೇಕು. ಜೊತೆಗೆ ಪ್ರಯಾಣಿಕರು ವರದಿಯನ್ನು ಪ್ರಮಾಣೀಕರಿಸಬೇಕು

4) ವಿಮಾನ ಪ್ರಯಾಣಕ್ಕೂ ಮೊದಲು ಪ್ರತಿಯೊಬ್ಬ ಪ್ರಯಾಣಿಕನ ತಾಪಮಾನ ಪರೀಕ್ಷೆ ನಡೆಸಲಾಗುತ್ತದೆ. ರೋಗಲಕ್ಷಣಗಳಿಲ್ಲದ ಪ್ರಯಾಣಿಕರಿಗೆ ಮಾತ್ರ ವಿಮಾನಯಾನ ನಡೆಸಲು ಅನುಮತಿ ನೀಡಲಾಗುತ್ತದೆ

5) ವಿಮಾನದಲ್ಲಿ ಪ್ರಯಾಣಿಕರಿಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ

6) ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಬಳಸಬೇಕು

7) ವಿಮಾನಯಾನದ ಹೊರತಾಗಿ ಜಲಮಾರ್ಗ, ಭೂಮಾರ್ಗದ ಮೂಲಕ ದೇಶ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೂಡ ಕೋವಿಡ್ 19 ಮಾರ್ಗಸೂಚಿ ಅನ್ವಯವಾಗುತ್ತದೆ.

8) ಯುನೈಟೈಡ್ ಕಿಂಗ್ ಡಂ. ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಏರ್ ಲೈನ್ ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಕೂಡ ತಿಳಿಸಲಾಗಿದೆ.

TRENDING