ಚಾಂದಪುರ: ಸ್ಥಳೀಯ ತಂತ್ರಜ್ಞಾನದೊಂದಿಗೆ ವಿನ್ಯಾಸಗೊಳಿಸಲಾದ ಸುಧಾರಿತ ವಿಎಲ್-ಎಸ್ಆರ್ಎಸ್ಎಂ ಕ್ಷಿಪಣಿಯನ್ನು ವಿಜ್ಞಾನಿಗಳು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಕ್ಷಿಪಣಿ ನಿಗದಿತ ಗುರಿಗಳನ್ನು ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ರಕ್ಷಣಾ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮತ್ತೊಂದು ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಒಡಿಶಾದ ಚಾಂದಪುರ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ಕೇಂದ್ರದಲ್ಲಿ ಲಂಬ ಉಡಾವಣಾ ಶಾರ್ಟ್ ರೇಂಜ್ ಸರ್ಫೇಸ್ ಟು ಏರ್ ಕ್ಷಿಪಣಿ (ವಿಎಲ್-ಎಸ್ಆರ್ಎಸ್ಎಂ) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಕ್ಷಿಪಣಿ ಸಮಯಕ್ಕೆ ಸರಿಯಾಗಿ ನಿಖರವಾದ ಗುರಿಗಳನ್ನು ಧ್ವಂಸಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.