Monday, March 8, 2021
Home ರಾಜ್ಯ ರಾಜ್ಯದಲ್ಲಿ ಮತ್ತೊಂದು ಜಿಲೇಟಿನ ಸ್ಫೋಟ ಪ್ರಕರಣ : ಐದು ಮಂದಿ ಸಾವು

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಮತ್ತೊಂದು ಜಿಲೇಟಿನ ಸ್ಫೋಟ ಪ್ರಕರಣ : ಐದು ಮಂದಿ ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮಾಸುವ ಮುನ್ನವೇ ಮತ್ತೆ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಐವರು ದಾರುಣವಾಗಿ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದಿದೆ.

ಜಿಲೆಟಿನ್‌ನಿಂದಾಗಿ ಭಾರೀ ಸ್ಪೋಟ ನಡೆದಿದ್ದು ಸ್ಪೋಟದ ರಭಸಕ್ಕೆ ಮೃತ ದೇಹಗಳು ಛಿದ್ರ ಛಿದ್ರವಾಗಿದೆ. 1000 ಅಡಿ ದೂರಕ್ಕೆ ಸ್ಪೋಟದ ತೀವ್ರತೆಗೆ ಮೃತದೇಹಗಳ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ ಎಂದು ತಿಳಿದು ಬಂದಿದೆ.

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್‌ಕುಮಾರ್‌, ರಾತ್ರಿ ಸುಮಾರು 12.30ರಿಂದ 12.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ ಯಾವ ಬಗೆಯ ಸ್ಫೋಟಕಗಳು ಎಂಬುದು ಪತ್ತೆಯಾಗಿಲ್ಲ. ಕ್ವಾರಿ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸ್ಫೋಟ ನಡೆದಿದೆ ಎಂದು ತಿಳಿಸಿದ್ದಾರೆ.

TRENDING