Monday, March 8, 2021
Home ಜಿಲ್ಲೆ ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣ : ಎನ್‌ಐಎಯಿಂದ 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಇದೀಗ ಬಂದ ಸುದ್ದಿ

ಡಿಜೆ ಹಳ್ಳಿ ಗಲಭೆ ಪ್ರಕರಣ : ಎನ್‌ಐಎಯಿಂದ 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

 ಬೆಂಗಳೂರು : ಆಗಸ್ಟ್ 11, 2020ರಂದು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಹೊಣೆಗಾರಿಕೆಯನ್ನು ರಾಜ್ಯ ಸರ್ಕಾರ ಎನ್‌ಐಎಗೆ ವಹಿಸಿತ್ತು. ಇಂತಹ ರಾಷ್ಟ್ರೀಯ ತನಿಖಾ ಸಂಸ್ಥೆ ಫೆ.10ರಂದು ನ್ಯಾಯಾಲಯಕ್ಕೆ 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ.

ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಫೆಬ್ರವರಿ 10ರಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) 7 ಸಾವಿರ ಪುಟಗಳ ಚಾರ್ಚ್ ಶೀಟ್ ಅನ್ನು ಬೆಂಗಳೂರು ಗಲಭೆ ಪ್ರಕರಣ ಕುರಿತಂತೆ ಸಲ್ಲಿಸಿದೆ. ಇಂತಹ ಚಾರ್ಚ್ ಶೀಟ್ ನಲ್ಲಿ ಮೊದಲೇ ಸಂಚು ರೂಪಿಸಿದ್ದ ಆರೋಪಿಗಳು, ಕೃಷ್ಣ ಜನ್ಮಾಷ್ಟಮಿ ದಿನವನ್ನು ಟಾರ್ಗೆಟ್ ಮಾಡಿದ್ದರು. ಇದೇ ವೇಳೆ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ನವೀನ್, ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದನು. ಇದನ್ನೇ ಸದುಪಯೋಗ ಮಾಡಿಕೊಂಡ ಆರೋಪಿಗಳು, ಗಲಭೆ ಎಬ್ಬಿಸಿದ್ದರು ಎಂದು ಉಲ್ಲೇಖಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಒಗ್ಗೂಡಿಸಿದ್ದ ಕಾರ್ಯಕರ್ತರು, ಗಲಭೆ ಎಬ್ಬಿಸಿದ್ದಾರೆ. ಪೊಲೀಸ್ ಠಾಣೆಗಳ ಮೇಲಿನ ದಾಳಿಗೆ ಪ್ರೇರಣೆಯಾಗಿದ್ದೂ ಸಹ ಸಾಮಾಜಿಕ ಜಾಲತಾಣವಾಗಿದೆ. ಪ್ರತಿಭಟನಾಕಾರರು ಫೇಸ್ ಬುಕ್ ಹಾಗೂ ಇತರ ಸಾಮಾಜಿಕ ಜಾಲತಾಣಗಳ ಮೂಲಕ ಗಲಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಚೋದನೆ ಮಾಡಿದ್ದರಿಂದಾಗಿಯೇ ಹೊರಗಿನಿಂದ ಜನ ಸೇರಲು ಕಾರಣವಾಯಿತು ಎಂಬ ಅಂಶಗಳನ್ನು ಉಲ್ಲೇಖಿಸಲಾಗಿದೆ.

TRENDING