Monday, March 8, 2021
Home ಸುದ್ದಿ ಜಾಲ ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ: ಸ್ಥಳದಲ್ಲೇ 7 ಮಂದಿ ಸಾವು

ಇದೀಗ ಬಂದ ಸುದ್ದಿ

ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ: ಸ್ಥಳದಲ್ಲೇ 7 ಮಂದಿ ಸಾವು

ಮಥುರಾ: ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಹಾಗೂ ಈ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಮಥುರಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಯಿಲ್ ಟ್ಯಾಂಕರ್ ಆಗ್ರಾ ಕಡೆಯ ಮಾರ್ಗದಲ್ಲಿ ಸಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಆಯಿಲ್ ಟ್ಯಾಂಕರ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಘರ್ಷಣೆಯ ಸಮಯದಲ್ಲಿ, ಟ್ಯಾಂಕರ್ ಮತ್ತು ಡಿವೈಡರ್ ನಡುವೆ ಕಾರು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

TRENDING