ವಾಶಿಂಗ್ಟನ್, ಫೆ.24: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಅಮೆರಿಕಾದಲ್ಲಿ ಮರಣಮೃದಂಗ ಬಾರಿಸುತ್ತಿದೆ. ಪ್ರತಿನಿತ್ಯ ಸಾವಿರಾರು ಜನರು ಮಹಾಮಾರಿಯಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಅಮೆರಿಕಾದಲ್ಲಿ ಈಗಾಗಲೇ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 2374 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5,14,966ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಂದೇ ದಿನ 70,560 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,88,97,224ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಪೈಕಿ 1,92,12,440 ಸೋಂಕಿತರು ಗುಣಮುಖರಾಗಿದ್ದು, 91,69,818 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ–ಅಂಶ:
ವಿಶ್ವದಲ್ಲಿ ಒಂದೇ ದಿನ ಒಟ್ಟು 3,69,917 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದರಿಂದಾಗಿ ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,26,36,741ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 10,221 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 24,95,290ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 8,82,23,912 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,19,17,539 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.