Saturday, February 27, 2021
Home ಕೋವಿಡ್-19 ದೇಶದಲ್ಲಿ ಒಂದೇ ದಿನದಲ್ಲಿ 13,742 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನದಲ್ಲಿ 13,742 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,742 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,30,176ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 104 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,567ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,46,907 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,037 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,21,65,598 ಜನರಿಗೆ ಲಸಿಕೆ ಹಾಕಲಾಗಿದೆ.

TRENDING