Monday, March 8, 2021
Home ರಾಜಕೀಯ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು: ಲಕ್ಷ್ಮಿ ಹೆಬ್ಬಾಳ್ಕರ್

ಇದೀಗ ಬಂದ ಸುದ್ದಿ

ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ

ಲಕ್ಷ್ಮೀ ಹೆಬ್ಬಾಳ್ಕರ್ ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಯಾರಿಗೂ ಶೋಭೆ ತರುವುದಿಲ್ಲ. ಅಭಿವೃದ್ಧಿ ಪರ ರಾಜಕಾರಣ ಬೆಂಬಲಿಸಬೇಕು. ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ ಎಂದು ಹೇಳಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್​ನ ಬಸ್ ನಿಲ್ದಾಣದಲ್ಲಿ ಹುಡುಕಬೇಕಾಗುತ್ತೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ತಿರುಗೇಟು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ರಾಮನ ಭಕ್ತೆ, ರಾಮಮಂದಿರಕ್ಕೆ 2 ಲಕ್ಷ ಕೊಟ್ಟಿದ್ದೇನೆ. ರಾಮನ ಪಕ್ಷದಲ್ಲಿ ಒಬ್ಬ ಮಹಿಳೆ ಬಗ್ಗೆ ಆಡುತ್ತಿರುವ ಮಾತುಗಳನ್ನು ಜನ ನೋಡುತ್ತಿದ್ದಾರೆ. ಆಕೆ, ಈಕೆ ಎನ್ನುವುದು, ಬಸ್ ನಿಲ್ದಾಣದಲ್ಲಿ ಹುಡುಕಬೇಕು, ಹಾಸ್ಪಿಟಲ್‌ಗೆ ಅಡ್ಮಿಟ್ ಮಾಡಬೇಕು ಎನ್ನುವುದು ಶೋಭೆ ತರುವ ವಿಚಾರವಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

TRENDING