Saturday, March 6, 2021
Home ರಾಜ್ಯ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ

ಇದೀಗ ಬಂದ ಸುದ್ದಿ

ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ

 ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಸಿದ್ಧಾಂತದ ಅನ್ವಯ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಅರವಿಂದ ಲಿಂಬಾವಳಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

TRENDING