Tuesday, April 13, 2021
Home ಅಂತರ್ ರಾಷ್ಟ್ರೀಯ ಅಮೆರಿಕಾದಲ್ಲಿ ಒಂದೇ ದಿನ 72721 ಮಂದಿಗೆ ಕೊರೊನಾ ವೈರಸ್ ದೃಢ!

ಇದೀಗ ಬಂದ ಸುದ್ದಿ

ಅಮೆರಿಕಾದಲ್ಲಿ ಒಂದೇ ದಿನ 72721 ಮಂದಿಗೆ ಕೊರೊನಾ ವೈರಸ್ ದೃಢ!

ವಾಶಿಂಗ್ಟನ್, ಫೆ.25: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕೊಂಚ ನಿಯಂತ್ರಣಕ್ಕೆ ಬಂದಿದ್ದ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತಷ್ಟು ಹೆಚ್ಚುತ್ತಿದೆ. ಒಂದೇ ದಿನ 72721 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಅಮೆರಿಕಾದಲ್ಲಿ ಮಹಾಮಾರಿಯಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ ಮಹಾಮಾರಿ ಕೊರೊನಾವೈರಸ್ ಸೋಂಕಿಗೆ 2376 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 5,17,408ಕ್ಕೆ ಏರಿಕೆಯಾಗಿದೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಈವರೆಗೂ 2,89,72,045 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 1,93,40,318 ಸೋಂಕಿತರು ಗುಣಮುಖರಾಗಿದ್ದು, 91,14,319 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿಅಂಶ:

ವಿಶ್ವದಲ್ಲಿ ಒಂದೇ ದಿನ ಒಟ್ಟು 4,34,428 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,30,79,561ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 10,641 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 25,06,752ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 8,86,98,691 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,18,74,118 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

TRENDING