Saturday, April 17, 2021
Home ಕ್ರೈಂ ನ್ಯೂಸ್ ಕೇರಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನ ಕೊಲೆ

ಇದೀಗ ಬಂದ ಸುದ್ದಿ

ಕೇರಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನ ಕೊಲೆ

 ಆಲಫುಳ : ಕೇರಳದ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಬುಧವಾರ ಎಸ್‌ಡಿಪಿಐ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ.

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್‌ ಅವರು, ಈ ಘಟನೆ ಹಿಂದೆ ಪಿಎಫ್‌ಐ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

TRENDING