Tuesday, April 13, 2021
Home ರಾಜಕೀಯ ಶರತ್ ಬಚ್ಚೇಗೌಡ ಇಂದು ಕಾಂಗ್ರೆಸ್ ಸೇರ್ಪಡೆ

ಇದೀಗ ಬಂದ ಸುದ್ದಿ

ಶರತ್ ಬಚ್ಚೇಗೌಡ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶರತ್ ತಂದೆ ಬಿ.ಎನ್.ಬಚ್ಚೇಗೌಡ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, ಬಿಜೆಪಿ ಮುಖಂಡರಾಗಿದ್ದ ಶರತ್ 2019 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಹಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಇದೀಗ ಅಧಿಕೃತವಾಗಿದೆ. ಗುರುವಾರ ( ಫೆ.25) ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

TRENDING