Tuesday, April 13, 2021
Home ಅಂತರ್ ರಾಜ್ಯ ಹರಿಯಾಣದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಮೂವರು ಸಾವು

ಇದೀಗ ಬಂದ ಸುದ್ದಿ

ಹರಿಯಾಣದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಮೂವರು ಸಾವು

ಕರ್ನಲ್ : ಹರಿಯಾಣದ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಮೂವರು ಸಾವನ್ನಪ್ಪಿರುವ ಘಟನೆ ಕರ್ನಲ್ ಜಿಲ್ಲೆಯಲ್ಲಿಯೂ ಸಂಭವಿಸಿದೆ.

ಕರ್ನಲ್ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಿಂದ ಮೂವರು ಮೃತಪಟ್ಟು ಒಬ್ಬರಿಗೆ ಗಾಯವಾದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ವರದಿಗಳ ಪ್ರಕಾರ, ಕಾರ್ಖಾನೆಯ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ರಾತ್ರಿ 9.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟವು ಎಷ್ಟು ಪ್ರಬಲವಾಗಿದೆ ಯೆಂದರೆ ಕಾರ್ಖಾನೆಯ ಬಹುಭಾಗಹಾನಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಮೃತಪಟ್ಟವರ ಕುಟುಂಬಸ್ಥರಿಗೆ ಮಾಹಿತಿ ತಲುಪಿಸಿದ್ದೇವೆ. ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಇನ್ನೂ ಗುರುತಿಸಲಾಗಲಿಲ್ಲ ಮತ್ತು ಇವರೆಲ್ಲರೂ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಾಗಿದ್ದರು. ಗಾಯಗೊಂಡ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಕರ್ನಾಲ್ ಪೊಲೀಸ್ ಅಧೀಕ್ಷಕ ಗಂಗಾ ರಾಮ್ ಪುನಿಯಾ ತಿಳಿಸಿದ್ದಾರೆ. ಸ್ಫೋಟಕ್ಕೆ ಕಾರಣವೇನೆಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ.

TRENDING