Tuesday, April 13, 2021
Home ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗ : ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು

ಇದೀಗ ಬಂದ ಸುದ್ದಿ

ಚಿತ್ರದುರ್ಗ : ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು

ಚಿತ್ರದುರ್ಗ: ನಾಯಕನಹಟ್ಟಿಯಲ್ಲಿ ಮಾರ್ಚ್ 29 ರಂದು ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ ಪೂರ್ವಸಿದ್ಧತಾ ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ಈ ಬಗ್ಗೆ ಸೂಚನೆ ನೀಡಿದ್ದಾರೆ.

ಜಾತ್ರೆಗೆ ಲಕ್ಷಾಂತರ ಜನ ಸೇರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಕೊರೊನಾ ಸೋಂಕು ಹರಡದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಜಾತ್ರೆ ರದ್ದು ಮಾಡಲು ಕ್ರಮಕೈಗೊಳ್ಳಲಾಗಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಮನ್ನೀಕೇರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಂಪ್ರದಾಯಿಕ ಪೂಜೆ ಕೈಂಕರ್ಯಗಳಿಗೆ ಸ್ಥಳೀಯರಿಗೆ ಅವಕಾಶ ನೀಡಲಾಗಿದೆ. ದೊಡ್ಡ ರಥೋತ್ಸವ, ಜಾತ್ರೆ, ಹೊರಗಿನ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ಹೇಳಲಾಗಿದೆ.

TRENDING