Tuesday, April 13, 2021
Home ಸುದ್ದಿ ಜಾಲ ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ 'ಸಂಪತ್ ರಾಜ್' ಪಾತ್ರವಿಲ್ಲ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿ

ಇದೀಗ ಬಂದ ಸುದ್ದಿ

ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ‘ಸಂಪತ್ ರಾಜ್’ ಪಾತ್ರವಿಲ್ಲ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿ

ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಹೊರ ಬಂದಿರುವಂತ ಮಾಜಿ ಮೇಯರ್ ಸಂಪತ್ ರಾಜ್ ನಿಂದ ತಮಗೆ ಜೀವಭಯವಿದೆ ಎಂಬುದಾಗಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದರು. ಇದರ ಬೆನ್ನಲ್ಲೇ, ಈ ಗಲಭೆ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಪಾತ್ರವಿಲ್ಲ. ಅವರ ವಿರುದ್ಧ ಪಕ್ಷದಿಂದ ಯಾವುದೇ ಶಿಸ್ತುಕ್ರಮ ಕೂಡ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ನಮ್ಮ ಪಕ್ಷದ ವರದಿಗಳನ್ನು ನೋಡಿದ್ದೇನೆ. ಬಿಜೆಪಿಯವರು ರಾಜಕೀಯಕ್ಕೆ ಹೇಳ್ತಾರೆ ಬಿಡಿ. ಆದ್ರೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಯಾವುದೇ ಒಬ್ಬ ಕಾಂಗ್ರೆಸ್ಸಿಗರ ಪಾತ್ರವಿಲ್ಲ. ಜೊತೆಗೆ ಮಾಜಿ ಮೇಯರ್ ಸಂಪತ್ ರಾಜ್ ಗಲಭೆಯಲ್ಲಿ ಪಾತ್ರವೂ ಇಲ್ಲ. ಹೀಗಾಗಿ ಸಂಪತ್ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.

TRENDING