Saturday, April 17, 2021
Home ಸುದ್ದಿ ಜಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ `ಸಕಾಲ ಸಪ್ತಾಹ' ಕಡ್ಡಾಯ : ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ `ಸಕಾಲ ಸಪ್ತಾಹ’ ಕಡ್ಡಾಯ : ಸುರೇಶ್ ಕುಮಾರ್

 ಬೆಂಗಳೂರು : ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಕಾಲ ಸಪ್ತಾಹವನ್ನು ಕಡ್ಡಾಯವಾಗಿ ಆಯೋಜಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವಿಡಿಯೋ ಸಂವಾದದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಇನ್ಮುಂದೆ ಎಲ್ಲ ಜಿಲ್ಲೆಗಳಲ್ಲಿ ಸಕಾಲ ಸಪ್ತಾಹವನ್ನು ಕಡ್ಡಾಯವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲ ಅಪರ ಜಿಲ್ಲಾಧಿಕಾರಿಗಳು ಪ್ರತಿ ಸೋಮವಾರ ಸಕಾಲ ಪ್ರಗತಿ ಪರಿಶೀಲನೆ ನಡೆಸಬೇಕು. ಪರಿಶೀಲನಾ ಸಮಿತಿ ಪ್ರತಿ ಶನಿವಾರ ತಮ್ಮ ವ್ಯಾಪ್ತಿಯಲ್ಲಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿ, ಸಕಾಲ ಅಡಿ ಸ್ವೀಕೃತವಾಗಿರುವ ಅರ್ಜಿ ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

TRENDING