ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಮುಂದಾಗಿರುವ ಸರ್ಕಾರ ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.
ಇದಕ್ಕೆ ಪೂರಕವಾಗಿ ಕೆಲವೊಂದು ನಿಯಮಾವಳಿಗಳನ್ನು ರೂಪಿಸಲು ಮುಂದಾಗಿದ್ದು, ಇದರನ್ವಯ 6 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಗುತ್ತದೆ.
6 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ನೀಡುವ ಜೊತೆಗೆ ಮುಂದಿನ ವರ್ಷದಿಂದ ಹೊಸ ವರ್ಗಾವಣೆ ನೀತಿ, ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿ ನಿಯಮದಲ್ಲಿ ಬದಲಾವಣೆ ಮಾಡಲಾಗುವುದು. ಸ್ವಯಂ ಸೇವಾ ಸಂಸ್ಥೆಗಳ ನಿಧಿಯನ್ನು ಹಾಸ್ಟೆಲ್ ಹಾಗೂ ಶಾಲೆಗಳ ಅಭಿವೃದ್ದಿಗೆ ಬಳಕೆ, ಅನುಕೂಲಸ್ಥ ಹಳೆ ವಿದ್ಯಾರ್ಥಿಗಳು ತಾವು ಓದಿದ ಶಾಲೆಯನ್ನು ದತ್ತು ಪಡೆಯಲು ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಲಾಗಿದೆ.