Saturday, April 17, 2021
Home ದಕ್ಷಿಣ ಕನ್ನಡ ಮಂಗಳೂರು ನೆಲ್ಯಾಡಿಯಲ್ಲಿ ಗ್ಯಾಸ್ ಟ್ಯಾಂಕರ್-ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ!

ಇದೀಗ ಬಂದ ಸುದ್ದಿ

ನೆಲ್ಯಾಡಿಯಲ್ಲಿ ಗ್ಯಾಸ್ ಟ್ಯಾಂಕರ್-ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ!

ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿತ್ತು. ಡೀಸೆಲ್ ಟ್ಯಾಂಕರ್ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಈ ವೇಳೆ ಹೊಸಮಜಲು ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಎರಡೂ ಟ್ಯಾಂಕರ್ ಗಳ ಚಾಲಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭಿಸಿದೆ.

TRENDING