Saturday, April 17, 2021
Home ಸುದ್ದಿ ಜಾಲ ಬಿಎಸ್‌ ಯಡಿಯೂರಪ್ಪ 79ನೇ ಹುಟ್ಟುಹಬ್ಬ : ಪ್ರಧಾನಿ ಸೇರಿ ವಿವಿಧ ಪಕ್ಷಗಳ ಗಣ್ಯರಿಂದ ಶುಭಾಷಯ

ಇದೀಗ ಬಂದ ಸುದ್ದಿ

ಬಿಎಸ್‌ ಯಡಿಯೂರಪ್ಪ 79ನೇ ಹುಟ್ಟುಹಬ್ಬ : ಪ್ರಧಾನಿ ಸೇರಿ ವಿವಿಧ ಪಕ್ಷಗಳ ಗಣ್ಯರಿಂದ ಶುಭಾಷಯ

ಬೆಂಗಳೂರು,ಫೆ.27- ಇಂದು 79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿವಿಧ ಪಕ್ಷಗಳ ಗಣ್ಯರು ಶುಭ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಮುಖ್ಯಮಂತ್ರಿಗೆ ಶುಭ ಕೋರಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಲಕ್ಷ್ಮಣ್ ಸವದಿ, ಸಚಿವರಾದ ಬಸವರಾಜ್ ಬೊಮ್ಮಾಯಿ, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ಕೆ.ಗೋಪಾಲಯ್ಯ, ಆರ್.ಅಶೋಕ್, ಎಸ್.ಸುರೇಶ್‍ಕುಮಾರ್, ಜೆ.ಸಿ.ಮಾಧುಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಜಿ.ಟಿ.ದೇವೇಗೌಡ ಸೇರಿದಂತೆ ಪಕ್ಷದ ಮುಖಂಡರು, ಅಭಿಮಾನಿಗಳು ನೆಚ್ಚಿನ ನಾಯಕನಿಗೆ ನೂರುಕಾಲ ಬಾಳಲಿ ಎಂದು ಹಾರೈಸಿದ್ದಾರೆ.

ಟ್ವೀಟ್ ಮೂಲಕ ಮುಖ್ಯಮಂತ್ರಿಗೆ ಹುಟ್ಟಹಬ್ಬದ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು ಎಂದು ಉಲ್ಲೇಖಿಸಿ, ರೈತರು ಹಾಗೂ ಬಡಜನರ ಏಳಿಗೆಗಾಗಿ ಯಡಿಯೂರಪ್ಪ ಅವರು ತಮ್ಮನ್ನೇ ಸಮರ್ಪಿಸಿಕೊಂಡಿದ್ದು, ಅವರ ದೀರ್ಘಾಯಸ್ಸು ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅವರ ಜನ್ಮದಿನದಂದು ಶುಭಾಶಯ ತಿಳಿಸುತ್ತೇನೆ. ಅವರು ಕರ್ನಾಟಕದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದಾರೆ. ಬಡವರನ್ನು ಮೇಲೆತ್ತುವ ಹಾಗೂ ರೈತರ ಸಬಲೀಕರಣದಲ್ಲಿ ಅವರು ಅವಿರತ ಕೆಲಸ ಮಾಡುತ್ತಿದ್ದಾರೆ. ಅವರ ಸುದೀರ್ಘ ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರು ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್‍ನಲ್ಲಿ ಶುಭಾಶಯ ತಿಳಿಸಿದ್ದಾರೆ.

ರೈತ ನಾಯಕ, ೀಮಂತ ರಾಜಕಾರಣಿ, ರಾಜ್ಯದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿರುವ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಬಿ. ಎಸ್.ಯಡಿಯೂರಪ್ಪರವರಿಗೆ 79ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂಬುದು ನಮ್ಮೆಲ್ಲರ ಪ್ರಾರ್ಥನೆ ಎಂದು ಜಿ.ಟಿ.ದೇವೇಗೌಡ ಶುಭ ಹಾರೈಸಿದ್ದಾರೆ.

ಯಡಿಯೂರಪ್ಪನವರ ಅಭಿಮಾನಿಗಳು ರಾಜ್ಯದ ನಾನಾ ಕಡೆ ವಿಶೇಷ ಪೂಜೆ, ಹೋಮಹವನ, ಉರುಳು ಸೇವೆ ಮೂಲಕ ನೆಚ್ಚಿನ ನಾಯಕನ ಹುಟ್ಟುಹಬ್ಬ ಆಚರಿಸಿದ್ದಾರೆ. ಸಂಜಯನಗರದಲ್ಲಿರುವ ರಾಧಕೃಷ್ಣ ದೇವಸ್ಥಾನಕ್ಕೆ ತೆರಳಿ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ ಅವರ ಅಕೃತ ನಿವಾಸ ಕಾವೇರಿಗೆ ಆಗಮಿಸಿ ಹಲವಾರು ಗಣ್ಯರು, ಹೂಗುಚ್ಚ ನೀಡಿ ಸಿಎಂಗೆ ಶುಭ ಕೋರಿದರು.

TRENDING