Tuesday, April 13, 2021
Home ಸುದ್ದಿ ಜಾಲ 79 ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿಎಸ್ ಯಡಿಯೂರಪ್ಪರಿಗೆ ಅಭಿಮಾನಿಗಳಿಂದ ಅಭಿನಂದನೆ

ಇದೀಗ ಬಂದ ಸುದ್ದಿ

79 ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿಎಸ್ ಯಡಿಯೂರಪ್ಪರಿಗೆ ಅಭಿಮಾನಿಗಳಿಂದ ಅಭಿನಂದನೆ

 ಬೆಂಗಳೂರು, ಫೆ. 27: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಫೆ 27) ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರು 79ನೇ ವಸಂತಕ್ಕೆ ಕಾಲಿರಿಸಿದ್ದಾರೆ. ನಾಲ್ಕನೆಯ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸುತ್ತಿರುವ ಯಡಿಯೂರಪ್ಪ ಅವರು ಇತ್ತೀಚೆಗಷ್ಟೇ ಮೊಮ್ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದರು.

78 ಪೂರೈಸಿ 79ನೇ ವಯಸ್ಸಿಗೆ ಅಡಿಯಿಟ್ಟಿರುವ ಯಡಿಯೂರಪ್ಪ ಅವರಿಗೆ ಸರ್ಕಾರದ ಸಹೋದ್ಯೋಗಿಗಳು, ರಾಜಕೀಯ ಪಕ್ಷಗಳ ನಾಯಕರು, ಅಭಿಮಾನಿಗಳು ಹಾಗೂ ಇತರರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಛಲ, ಸಂಕಲ್ಪ ಶಕ್ತಿ ಮತ್ತು ಹೋರಾಟದ ಮೂಲಕವೇ ಗುರುತಿಸಿಕೊಂಡಿರುವ ಅಭಿವೃದ್ಧಿಯ ಹರಿಕಾರ, ರೈತಬಂಧು, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪೂಜ್ಯ ತಂದೆಯವರಾದ ಶ್ರೀಯುತ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವರು ನಿಮಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಯಡಿಯೂರಪ್ಪ ಅವರ ಮಗ, ಸಂಸದ ಬಿವೈ ರಾಘವೇಂದ್ರ ಶುಭಾಶಯ ಕೋರಿದ್ದಾರೆ.

ನಮ್ಮ ನೆಚ್ಚಿನ ನಾಯಕ, ರೈತಬಂಧು, ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದಂದು ನನ್ನ ಹಾರ್ದಿಕ ಶುಭಾಶಯಗಳು. ನಾಡಿನ ಸಮಗ್ರ ಅಭಿವೃದ್ಧಿ, ಸುದೀರ್ಘ ಸಾರ್ವಜನಿಕ ಸೇವೆಗಾಗಿ ಭಗವಂತನ ಶುಭಾಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಶುಭ ಹಾರೈಸುತ್ತೇನೆ ಎಂದು ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪ ನವರಿಗೆ ಜನುಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಆರೋಗ್ಯ ಮತ್ತು ಹೆಚ್ಚಿನ ಚೈತನ್ಯ ನೀಡಲಿ. ಅವರಿಂದ ಜನಪರ ಕಾರ್ಯಗಳು ಇನ್ನಷ್ಟು ಹೆಚ್ಚಾಗಿ ನಡೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ದಣಿವರಿಯದ ನಾಯಕ, ಹುಟ್ಟು ಹೋರಾಟಗಾರ, ತನ್ನ ಜೀವನವನ್ನು ರೈತರ ಅಭ್ಯುದಯಕ್ಕಾಗಿ ಮೀಸಲಿಟ್ಟ ರೈತ ಬಂಧು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತನು ಉತ್ತಮ ಆರೋಗ್ಯ, ದೀರ್ಘಾಯುಷ್ಯ & ಮತ್ತಷ್ಟು ಕಾಲ ತಾಯಿ ಭಾರತಿ ಹಾಗು ಕನ್ನಡಾಂಬೆಯ ಸೇವೆ ಮಾಡುವ ಭಾಗ್ಯ ನೀಡಿ ಹರಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಶುಭ ಕೋರಿದ್ದಾರೆ.

ರೈತ ಬಂಧು, ದಿಟ್ಟ ದೀಮಂತ ನಾಯಕರು ರಾಜ್ಯದ ಮುಖ್ಯಮಂತ್ರಿಗಳು ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.

TRENDING