Saturday, April 17, 2021
Home ಕೋವಿಡ್-19 ಕೋವಿಡ್-19 ಮಾರ್ಗಸೂಚಿ ಮಾ.31ರವರೆಗೆ ವಿಸ್ತರಣೆ

ಇದೀಗ ಬಂದ ಸುದ್ದಿ

ಕೋವಿಡ್-19 ಮಾರ್ಗಸೂಚಿ ಮಾ.31ರವರೆಗೆ ವಿಸ್ತರಣೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾರ್ಗಸೂಚಿಗಳನ್ನು ಮಾರ್ಚ್ 31ರವರೆಗೆ ವಿಸ್ತರಿಸಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲ, ಕೋವಿಡ್-19 ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಗ್ರಹಿಸಲು ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

TRENDING