Saturday, April 17, 2021
Home ಸುದ್ದಿ ಜಾಲ ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

ಇದೀಗ ಬಂದ ಸುದ್ದಿ

ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

ನವದೆಹಲಿ, ಫೆ. 27: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಸ್ವಲ್ಪ ವ್ಯತ್ಯಾಸ ಆಗಿದ್ದನ್ನೇ ನೆಪ ಮಾಡಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಿದೆ. ತಿಂಗಳ ಆರಂಭದಲ್ಲಿ ಶುರುವಾದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಅಭಿಯಾನ ತಿಂಗಳ ಕೊನೆಯಲ್ಲೂ ನಿಂತಿಲ್ಲ. ಕಳೆದ 53 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 26 ಬಾರಿ ಹೆಚ್ಚಾಗಿದೆ. ಜನವರಿ 1ರಿಂದೀಚೆಗೆ 7.93 ರೂಪಾಯಿ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ 16ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿದೆ. ಕಳೆದ 16 ದಿನಗಳಿಂದ 4.97 ಪೈಸೆ ಬೆಲೆ ಹೆಚ್ಚಳ ಮಾಡಲಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫೆಬ್ರವರಿ 4ರಂದು ತಾರೀಖು ತಲಾ 37 ಪೈಸೆ, ಫೆಬ್ರವರಿ 5ರಂದು 37 ಪೈಸೆ, ಫೆಬ್ರವರಿ 9ರಂದು 42 ಪೈಸೆ, ಫೆಬ್ರವರಿ 10ರಂದು 31 ಪೈಸೆ, ಫೆಬ್ರವರಿ 11ರಂದು 38 ಪೈಸೆ, ಫೆಬ್ರವರಿ 12ರಂದು 38 ಪೈಸೆ, ಫೆಬ್ರವರಿ 13ರಂದು 39 ಪೈಸೆ, ಫೆಬ್ರವರಿ 14ರಂದು 34 ಪೈಸೆ, ಫೆಬ್ರವರಿ 15ರಂದು 30 ಪೈಸೆ, ಫೆಬ್ರವರಿ 16ರಂದು 38 ಪೈಸೆ, ಫೆಬ್ರವರಿ 17ರಂದು 27 ಪೈಸೆ, ಫೆಬ್ರವರಿ 18ರಂದು 36 ಪೈಸೆ ಹೆಚ್ಚಳ, ಫೆಬ್ರವರಿ 19ರಂದು 36 ಪೈಸೆ, ಫೆಬ್ರವರಿ 20ರಂದು 41 ಪೈಸೆ ಹಾಗೂ ಫೆಬ್ರವರಿ 23ರಂದು 38 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಫೆಬ್ರವರಿ 27ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 25 ಪೈಸೆ ಹೆಚ್ಚಳ ಮಾಡಲಾಗಿದೆ.

ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿವರ ಹೀಗಿದೆ.
ಬೆಂಗಳೂರು- ಪೆಟ್ರೋಲ್ 94.22 ರೂ., ಡೀಸೆಲ್ 86.37 ರೂ.
ಭೂಪಾಲ್- ಪೆಟ್ರೋಲ್ 99.21 ರೂ., ಡೀಸೆಲ್ 89.76 ರೂ.
ಮುಂಬೈ- ಪೆಟ್ರೋಲ್ 97.57 ರೂ., ಡೀಸೆಲ್ 88.60 ರೂ.ಜೈಪುರ – ಪೆಟ್ರೋಲ್ 97.72 ರೂ., ಡೀಸೆಲ್ 89.98 ರೂ.
ಪಾಟ್ನಾ- ಪೆಟ್ರೋಲ್ 93.48 ರೂ., ಡೀಸೆಲ್ 86.73 ರೂ.
ಚೆನ್ನೈ- ಪೆಟ್ರೋಲ್ 93.11 ರೂ., ಡೀಸೆಲ್ 86.45 ರೂ.
ಕೋಲ್ಕತ್ತಾ- ಪೆಟ್ರೋಲ್ 91.78 ರೂ., ಡೀಸೆಲ್ 84.56 ರೂ.
ದೆಹಲಿ- ಪೆಟ್ರೋಲ್ 91.17 ರೂ., ಡೀಸೆಲ್ 81.47 ರೂ.
ಲಕ್ನೋ- ಪೆಟ್ರೋಲ್ 89.31 ರೂ., ಡೀಸೆಲ್ ರೂ.
ನೋಯ್ಡಾ- ಪೆಟ್ರೋಲ್ 88.54 ರೂ., ಡೀಸೆಲ್ 80 ರೂ.
ಗುರುಗಾವ್ – ಪೆಟ್ರೋಲ್ 87.98 ರೂ., ಡೀಸೆಲ್ 78.98 ರೂ.
ರಾಂಚಿ- ಪೆಟ್ರೋಲ್ 88.54 ರೂ., ಡೀಸೆಲ್ 86.12 ರೂ.

TRENDING