Saturday, April 17, 2021
Home ರಾಜಕೀಯ ಕರ್ನಾಟಕದ 4 ಕ್ಷೇತ್ರಗಳ ಉಪ ಚುನಾವಣೆ ಘೋಷಿಸಿದ ಆಯೋಗ

ಇದೀಗ ಬಂದ ಸುದ್ದಿ

ಕರ್ನಾಟಕದ 4 ಕ್ಷೇತ್ರಗಳ ಉಪ ಚುನಾವಣೆ ಘೋಷಿಸಿದ ಆಯೋಗ

ನವದೆಹಲಿ, ಫೆ. 27: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಪ್ರವಾಸ ಪೂರೈಸಿದ ಬಳಿಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಿಸಲಾಗಿದೆ. ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಮೂಲಕ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಫೆ.26ರಂದು ಸುದ್ದಿಗೋಷ್ಠಿ ನಡೆಸಿದ ಸಿಇಸಿ ಸುನಿಲ್ ಅರೋರಾ ಅವರು ಕರ್ನಾಟಕ ಹಾಗೂ ಇತರೆ ರಾಜ್ಯಗಳ ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದಾರೆ.

ಐದು ರಾಜ್ಯಗಳ ಜೊತೆಗೆ ಕರ್ನಾಟಕದ ಒಂದು ಲೋಕಸಭೆ ಹಾಗೂ ಮೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕವನ್ನು ಪ್ರಕಟಿಸಲಾಗುವುದು. ಮಾರ್ಚ್ 27ರಿಂದ ಮೇ 2 ರೊಳಗೆ ಕರ್ನಾಟಕ, ಆಂಧ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ 18ಕ್ಕೂ ಅಧಿಕ ಉಪ ಚುನಾವಣೆ ಪ್ರಕ್ರಿಯೆ ಮುಗಿಸಬೇಕಿದೆ. ಎಲ್ಲಾ ವಿಧಾನಸಭೆ, ಲೋಕಸಭೆ ಉಪ ಚುನಾವಣೆಗಳ ಫಲಿತಾಂಶವೂ ಮೇ 2ರಂದೇ ಪ್ರಕಟವಾಗಲಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಜೊತೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧಾನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಬೇಕಿದೆ.

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ. ಮತದಾನಕ್ಕೆ 1 ಗಂಟೆ ಹೆಚ್ಚಿನ ಅವಧಿ ನೀಡಲಾಗಿದೆ ಎಂದು ಹೇಳಿದರು.

TRENDING