Saturday, April 17, 2021
Home ಸುದ್ದಿ ಜಾಲ ಚಮೋಲಿ ನೀರ್ಗಲ್ಲು ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 72ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಚಮೋಲಿ ನೀರ್ಗಲ್ಲು ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 72ಕ್ಕೆ ಏರಿಕೆ

ನವದೆಹಲಿ: ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಬಂಡೆ ಸ್ಫೋಟ ಮತ್ತು ಪ್ರವಾಹ ದುರಂತ ಘಟನೆಯಲ್ಲಿ ಮಡಿದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಮತ್ತೆ ತಪೋವನ ಸುರಂಗದಲ್ಲಿ 2 ಮೃತದೇಹಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.

ಹಿಮಬಂಡೆ ಸ್ಫೋಟಗೊಂಡ ಆರಂಭದಲ್ಲಿ 30 ಮೃತದೇಹಗಳನ್ನು ಪತ್ತೆಹಚ್ಚಲಾಗಿತ್ತು. ನಂತರ 40 ಮೃತದೇಹಗಳು ದೊರಕಿದ್ದವು. ಇದೀಗ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಚಿಮೋಲಿ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಜೋಶಿಮತ್ ಪೊಲೀಸ್ ಠಾಣೆಯಲ್ಲಿ ಈವರೆಗೆ 205 ಜನರ ನಾಪತ್ತೆಯಾಗಿರುವ ಪ್ರಕರಣಗಳು ದಾಖಲಾಗಿವೆ. ಗುರುತಿಸಲಾಗದ ಮೃತದೇಹಗಳ ಡಿಎನ್‌ಎ ಮಾದರಿಗಳನ್ನು ಸಂರಕ್ಷಿಸಲಾಗುತ್ತಿದೆ. 28 ಮಂದಿಯ ಮೃತದೇಹಗಳ ಭಾಗಗಳನ್ನು ಡೆಹ್ರಾಡೂನ್ ನಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ನಾಪತ್ತೆಯಾದವರಿಗಾಗಿ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದ್ದು, ಇಂಡೋ-ಟಿಬೆಟಿಯನ್ ಗಡಿ ಪೊಲೀಸರು, ವಿಪತ್ತು ನಿರ್ವಹಣಾ ಪತೆ ಪಡೆ ಮತ್ತು ಇತರೆ ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಚಮೋಲಿ ಜಿಲ್ಲೆಯಲ್ಲಿ ಧೌಲಿಗಂಗಾ ನದಿಯ ಹಿಮಬಂಡೆ ಸ್ಫೋಟಗೊಂಡ ಪರಿಣಾಮ ಗಂಗಾ ನದಿಯ ಉಪನದಿಗಳಾದ ಧೌಲಿಗಂಗಾ ಮತ್ತು ಅಲಕನಂದ ನೀರು ಉಕ್ಕೇರಿ ಭೀಕರ ಪ್ರವಾಹ ಸೃಷ್ಟಿಯಾಗಿತ್ತು.

TRENDING