Saturday, April 17, 2021
Home ಸುದ್ದಿ ಜಾಲ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ದಿನಾಂಕ 05:03:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಅಂಕಪಟ್ಟಿ

ಜಾತಿ ಹಾಗೂ ಆದಾಯ ಪ್ರಮಾಣ ಪತ್ರ

ಆಧಾರ್ ಕಾರ್ಡ್

ಭಾವಚಿತ್ರ

ರೇಷನ್ ಕಾರ್ಡ್ ಜೆರಾಕ್ಸ್

TRENDING