Tuesday, April 13, 2021
Home ಸುದ್ದಿ ಜಾಲ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಇದೀಗ ಬಂದ ಸುದ್ದಿ

ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ತಗುಲಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕು ತಗುಲಿದ ಪರಿಣಾಮ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಏಪ್ರಿಲ್ 1 ರಂದು ಸೋಂಕು ತಗಲಿದ್ದು, ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನಂತರ ಬಿಡುಗಡೆಯಾಗಿದ್ದಾರೆ. ಅವರು ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರಬೇಕಿದೆ. 7 ದಿನಗಳ ನಂತರ ಕೋವಿಡ್ ಟೆಸ್ಟ್ ಮಾಡಲಿದ್ದು ದೂರದ ಊರುಗಳಿಗೆ ಪ್ರಯಾಣ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

TRENDING