Saturday, April 17, 2021
Home ಸುದ್ದಿ ಜಾಲ ಲಾರಿ- ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಇದೀಗ ಬಂದ ಸುದ್ದಿ

ಲಾರಿ- ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗಕಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಚಳ್ಳಕೆರೆ ರಸ್ತೆಯಲ್ಲಿ ಬುಧವಾರ ನಸುಕಿನಲ್ಲಿ ನಡೆದಿದೆ.

ಬೆಂಗಳೂರಿನ ಸಂಜೀವ ನಗರದ ಕುಮಾರ್ (48) ಹಾಗೂ ದೇವರಾಜ (38) ಮೃತಪಟ್ಟವರು. ಜಯರಾಮ್, ಗಿರೀಶ್, ಶ್ರೀನಿವಾಸ್ ಎಂಬುವರು ಗಾಯಗೊಂಡಿದ್ದಾರೆ. ಇವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕಳುಹಿಸಲಾಗಿದೆ.

ಬೆಂಗಳೂರಿನಿಂದ ಬಳ್ಳಾರಿ ಸಮೀಪದ ಪಾಂಡುರಂಗಸ್ವಾಮಿ ದೇವಸ್ಥಾನಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಿಂದ ತಿರುವು ಪಡೆದು ಚಳ್ಳಕೆರೆ ರಸ್ತೆಯಲ್ಲಿ ಸಾಗುವಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

TRENDING