Saturday, April 17, 2021
Home ರಾಜ್ಯ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

 ಬೆಂಗಳೂರು : ರಾಜ್ಯ ಸರ್ಕಾರವು ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳ ಮನೆ ಮನೆಗೆ ಶಿಕ್ಷಕರು ಭೇಟಿ ನೀಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ವಿದ್ಯಾಗಮ ಮತ್ತು ಭೌತಿಕ ತರಗತಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ್ದು, ಶಿಕ್ಷಕರು ಮನೆ ಮನೆಗೆ ಭೇಟಿ ನೀಡಿ ಕಲಿಕೆಯ ಅವಲೋಕನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಕ್ಲಸ್ಟರ್ ಸಿಆರ್ ಪಿಗಳಿಗೆ ಜ್ಞಾಪನ ಪತ್ರ ಕಳುಹಿಸಿದೆ.

6 ರಿಂದ 9 ನೇ ತರಗತಿಗಳಿಗೆ ಏಪ್ರಿಲ್ 28 ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಲಾಗಿದ್ದು, ಈ ಅವಧಿಯಲ್ಲಿ ಮಕ್ಕಳ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಈ ಮೂಲಕ ಮಕ್ಕಳು ಕಲಿಕೆಯನ್ನು ಮುಂದುವರಿಸಲು ಪ್ರೇರಪಣೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

TRENDING