Saturday, April 17, 2021
Home ಜಿಲ್ಲೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಇದೀಗ ಬಂದ ಸುದ್ದಿ

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

 ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ.

ರಾಜ್ಯ ಸರ್ಕಾರವು ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯದ 1.30 ಸಾವಿರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ.

ಮುಷ್ಕರ ಕೈಬಿಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದ್ರೂ, ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಸಾರಿಗೆ ನೌಕರರಿಗೆ ಪ್ರತಿ ತಿಂಗಳ 10 ನೇ ತಾರೀಖು ಸಂಬಳವಾಗುತ್ತಿತ್ತು. ಆದರೆ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರ ಮಾರ್ಚ್ ತಿಂಗಳ ಸಂಬಳ ತಡೆಹಿಡಿಯಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.

TRENDING