Tuesday, April 13, 2021
Home ರಾಜ್ಯ ವರ್ಗಾವಣೆ ನಿರೀಕ್ಷೆಯಲ್ಲಿರುವ ರಾಜ್ಯದ ಶಾಲಾ ಶಿಕ್ಷಕರಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿರುವ ರಾಜ್ಯದ ಶಾಲಾ ಶಿಕ್ಷಕರಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಹೊಸ ಶಿಕ್ಷಕರ ವರ್ಗಾವಣೆ ಕಾಯ್ದೆಯನ್ವಯ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಗೊಳ್ಳುವ ಹಂತದಲ್ಲಿ ಕೆಲವು ಶಿಕ್ಷಕರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ ಕಾರಣ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇಂತಹ ಶಿಕ್ಷಕರ ವರ್ಗಾವಣೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತ್ರ ಶೀಘ್ರವೇ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸುವ ಭರವಸೆಯನ್ನು ಸಿಎಂ ಹಾಗೂ ಶಿಕ್ಷಣ ಸಚಿವರು ನೀಡಿದ್ದಾರೆ.

ಈ ಕುರಿತಂತೆ ಕರ್ನಾಟ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಭೇಟಿ ಮಾಡಿ, ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಆರಂಭಿಸುವಂತೆ ಮನವಿ ಮಾಡಿತ್ತು.

ಇಂತಹ ಮನವಿಗೆ ಪ್ರತಿಸ್ಪಂದಿಸಿರುವಂತ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಮುಂದಿನ ಸಚಿವ ಸಂಪುಟದಲ್ಲಿ ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವನೆಗೆ ಅನುಮೋದನೆ ಪಡೆದು, ಶೀಘ್ರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಭರವಸೆ ನೀಡಿದ್ದಾರೆ.

ಆದ್ದರಿಂದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆತಂಕ, ಗೊಂದಲಕ್ಕೆ ಒಳಗಾಗ ಬಾರದು ಎಂಬುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

TRENDING