Saturday, April 17, 2021
Home ಸುದ್ದಿ ಜಾಲ ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಸಚಿವ ಲಕ್ಷ್ಮಣ...

ಇದೀಗ ಬಂದ ಸುದ್ದಿ

ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಸಚಿವ ಲಕ್ಷ್ಮಣ ಸವದಿ ಮನವಿ

ಬೀದರ್ : ಸಾರಿಗೆ ನೌಖರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ಸಿದ್ಧವಿದೆ. ಹೀಗಾಗಿ ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿದ್ದು, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ. ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು, ಮುಷ್ಕರ ನಡೆಸಿದರೆ ಇಲಾಖೆಗೆ ನಷ್ಟವಾಗಿ ವೇತನ ನೀಡಲು ಕಷ್ಟವಾಗುತ್ತದೆ ಹೀಗಾಗಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಮನವಿ ಮಾಡಿದ್ದಾರೆ.

ಇನ್ನು ಮುಷ್ಕರ ನಿರತ ಸಾರಿಗೆ ನೌಕರರ ಮುಷ್ಕರಕ್ಕೆ ಬಿಗ್ ಶಾಕ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ನೌಕರರ ಮಾರ್ಚ್ ತಿಂಗಳ ವೇತನ ಬಿಡುಗಡೆಗೆ ತಡೆಹಿಡಿಯಲು ಮುಂದಾಗಿದೆ ಎಂದು ತಿಳಿದುಬಂದಿದೆ.

TRENDING