ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮ್ಮೆಯೊಂದು ದಾಖಲಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸದ ಆರೋಪದಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಬಿ ಮಾರುತಿ ದಾಖಲಿಸಿಲ್ಲ. ಇದರ ಬದಲಾಗಿ ದೂರುದಾರರನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ ಎಂಬುದಾಗಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಇಂತಹ ಅರ್ಜಿಯನ್ನು ಅಂಗೀಕರಿಸಿರುವಂತ ನ್ಯಾಯಾಲಯ, ಏಪ್ರಿಲ್ 16ರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.