ಶಿವಮೊಗ್ಗ : ರಾಜ್ಯಾಧ್ಯಂತ ಇಂದು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇತ್ತ ಶಿವಮೊಗ್ಗ ಜಿಲ್ಲೆಯಲ್ಲೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದೆ. ಜಿಲ್ಲೆಯ ಸಾಗರ ತಾಲೂಕಿನಲ್ಲೂ ಪ್ರಯಾಣಿಕರಿಗೆ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ಸಾರಿಗೆ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿರುವುದು ಕಂಡು ಬಂದಿದೆ.
ಜಿಲ್ಲೆಯ ಸಾಗರ ತಾಲೂಕಿನಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರದ ಬಿಸಿ ಮುಟ್ಟಿದೆ. ನಗರದಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಸಾರಿಗೆ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಸಂಚಾರವೇ ಸ್ಥಬ್ದಗೊಂಡಿದೆ. ಇಂತಹ ಸಾರಿಗೆ ಬಸ್ ನಿಲ್ದಾಣಕ್ಕೆ ಆಗಮಿಸಿರುವಂತ ಖಾಸಗಿ ಬಸ್ ಗಳು, ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ.